ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮ: ಕಾರ್ಯಾಲಯ ಉದ್ಘಾಟನೆ

Ravi Talawar
WhatsApp Group Join Now
Telegram Group Join Now

ಬಾಗಲಕೋಟೆ,.01: ಲೋಕಸಭಾ ಚುನಾವಣೆ ನಿಮಿತ್ಯ ಭಾರತೀಯ ಜನತಾ ಪಕ್ಷ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಇದೆ ದಿನಾಂಕ ೨ ಮಂಗಳವಾರ ದಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಚರಂತಿಮಠ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಜರುಗಲಿದೆ.

ಅಲ್ಲದೆ ನಗರ ಹಾಗೂ ಗ್ರಾಮೀಣ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ, ಇದಕ್ಕಿಂತ ಮುಂಚೆ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಾಗಲಕೋಟೆ ವಿಧಾನ ಸಭಾ ಮತಕ್ಷೇತ್ರ ಚುನಾವಣಾ ಪ್ರಚಾರ ಕಾರ್ಯಾಲದಯ ಉದ್ಘಾಟನೆ ಜರುಗಲಿದೆ.

ಈ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣಾ ಉಸ್ತುವಾರಿ ಲಿಂಗರಾಜ ಪಾಟೀಲ, ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ನಿಕಟಪೂರ್ವ ಶಾಸಕರಾದ ಡಾ.ವೀರಣ್ಣ ಚರಂತಿಮಠ, ಶಾಸಕರು, ಮಾಜಿ ಶಾಸಕರುಗಳು, ಮುಖಂಡರು, ಜಿಲ್ಲಾ, ೨ ನಗರ ಮತ್ತು ಗ್ರಾಮೀಣ ಪದಾಧೀಕಾರಿಗಳು, ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

 

WhatsApp Group Join Now
Telegram Group Join Now
Share This Article