ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ ಮತ್ತೊಮ್ಮೆ ಪ್ರತಿಕ್ರಿಯೆ: ಭಾರತ ತೀವ್ರ ಆಕ್ಷೇಪ

Ravi Talawar
WhatsApp Group Join Now
Telegram Group Join Now

ದೆಹಲಿ,ಮಾ28 ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಅಮೆರಿಕದ ರಕ್ಷಣಾ ಇಲಾಖೆ ವಕ್ತಾರ ಮ್ಯಾಥ್ಯೂ ಬುಧವಾರ ತಮ್ಮ ನಿಲುವನ್ನು ಪುನರುಚ್ಚರಿಸಿ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಕಾಲಿಕ ಕಾನೂನು ಕ್ರಮಗಳನ್ನು ವಾಷಿಂಗ್ಟನ್ ಸ್ವಾಗತಿಸುತ್ತದೆ ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಹಲವು ಕ್ರಮಗಳನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ ಎಂದು ಮಿಲ್ಲರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೂ ಉತ್ತರಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸೌತ್ ಬ್ಲಾಕ್ ಕಚೇರಿಯಲ್ಲಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ಅದರ ವಿರುದ್ಧ ಆರೋಪಗಳನ್ನು ಮಾಡುವುದು ಸೂಕ್ತವಲ್ಲ ಎಂದು ಸಚಿವಾಲಯ ಪ್ರತಿಪಾದಿಸಿದೆ.

ಕೇಜ್ರಿವಾಲ್ ನ್ಯಾಯಯುತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಹೇಳಿಕೆ ನೀಡಿದೆ. ಆಂತರಿಕ ವ್ಯವಹಾರಗಳಲ್ಲಿ ಬಲವಂತದ ಹಸ್ತಕ್ಷೇಪ ಎಂದು ಭಾರತ ಹೇಳಿದೆ.

 

WhatsApp Group Join Now
Telegram Group Join Now
Share This Article