ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ: ರೂ.25 ಕೋಟಿ ಹಣ ವಶ

Ravi Talawar
WhatsApp Group Join Now
Telegram Group Join Now

ರಾಂಚಿ,06: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ರೂ.25 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿ 2023 ರಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬುವವರನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಬಂಧನಕ್ಕೊಳಪಡಿಸಲಾಗಿತ್ತು.

ಈ ಪ್ರಕರಣದಲ್ಲಿ ಮತ್ತಷ್ಟು ತನಿಖೆ ಕೈಗೊಂಡಿರುವ ಇಡಿ, ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ, ದಾಳಿ ವೇಳೆ ಕಂತೆ ಕಂತೆ ನೋಟುಗಳನ್ನು ಕಂಡು ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಇಡಿ ಅಧಿಕಾರಿಗಳು ರೂ.20-25 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದ್ದು, ಎಣಿಕೆ ಯಂತ್ರಗಳ ಮೂಲಕ ನೋಟುಗಳನ್ನು ಲೆಕ್ಕ ಮಾಡಲಾಗುತ್ತಿದೆ ಎನ್ನಲಾಗಿದೆ.

ಇಡಿ ದಾಳಿ ಬೆನ್ನಲ್ಲೇ ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಲಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ, ‘ಎಣಿಕೆ ಮುಗಿಯಲಿ, ಈ ಸಂಖ್ಯೆ 50 ಕೋಟಿ ತಲುಪಲಿದೆ. ಇಡೀ ಜಾರ್ಖಂಡ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Share This Article