ಸರ್ವತೋಮುಖದ ಅಭಿವೃದ್ಧಿಗಾಗಿ ಕೈ ಪಕ್ಷ ಬೆಂಬಲಿಸಿ: ಅಭ್ಯರ್ಥಿ ಪ್ರಿಯಂಕಾ  ಜಾರಕಿಹೊಳಿ

Ravi Talawar
WhatsApp Group Join Now
Telegram Group Join Now

ಬೆಳಗಾವಿ,ಏ.03:  ಚಿಕ್ಕೋಡಿ ಲೋಕಸಭಾ  ಸರ್ವತೋಮುಖದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಯುಕ್ತ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾಪಂ ವ್ಯಾಪ್ತಿಯ ಚಂದಗಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ನಾನು ಕಳೆದ 4-5 ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಸ್ವಯಂಪ್ರೇರಿತರಾಗಿ ತೊಡಗಿಸಿಕೊಂಡಿದ್ದು, ತಾವೆಲ್ಲರೂ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿರಿ ಎಂದು ಮನಪೂರ್ವಕವಾಗಿ ಕಾರ್ಯಕರ್ತರಲ್ಲಿ ಕೇಳಿಕೊಂಡರು.

ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ  ಮತದಾರರು ಮತ ನೀಡುವಂತೆ  ಕೈ ಕಾರ್ಯಕರ್ತರು ಕಾಂಗ್ರೆಸ್‌ ಜಾರಿಗೆ ತಂದ ಯೋಜನೆಗಳನ್ನು ಮನೆ ಮನೆಗೆ ತಿಳಿಸಿಬೇಕು. ಸಚಿವರಾದ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರನ್ನು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಚಿಕ್ಕೋಡಿ ಲೋಕಸಭೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಹಾಗೂ ಸುವರ್ಣ ಚಿಕ್ಕೋಡಿ ಕನಸು ನನಸು ಮಾಡಲಾಗುವುದು ಎಂದರು.

ಈ ವೇಳೆಸಚಿವರ ಆಪ್ತ ಸಹಾಯಕರಾದ ಅರವೀಂದ ಕಾರ್ಚಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ಮುಖಂಡರ ಕೊಡುಗೆ ಅಪಾರ. ಸಾಮಾಜಿಕ ನ್ಯಾಯ ಕೊಡುವಲ್ಲಿ ಕಾಂಗ್ರೆಸ್‌ ಪಕ್ಷ ದ ಪಾತ್ರ ಮುಖ್ಯ ಪಾತ್ರ ವಹಿಸಿದೆ. ಇಂದಿನ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ. ಅಚ್ಛೆ ದಿನ್‌ ಬರುತ್ತವೆ ಎಂದು ಹೇಳಿರುವ ಬಿಜೆಪಿ, 10 ವರ್ಷ ಗತಿಸಿದರೂ ಯಾವುದೇ ಅಚ್ಛೆ ದ್ದಿನ್‌ ತರಲಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಅಭಿವೃದ್ಧಿ ಹಾಗೂ ಪಕ್ಷ ದ ತತ್ವ ಸಿದ್ಧಾಂತಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಬೂತ ಮಟ್ಟದಿಂದ ಪಕ್ಷ ಸಂಗಟಿಸಲು ಕಾರ್ಯಕರ್ತರು ಸಿದ್ದರಾಗಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಅರವೀಂದ ಕಾರ್ಚಿ ಹಾಗೂ ಚಂದಗಡ ಗ್ರಾಮದ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article