This is the title of the web page
Left Banner (Left Skyscraper)
Right Banner (Right Skyscraper)

ಕಾಲೇಜು ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

19ಕ್ಕೂ ಹೆಚ್ಚು ಜನರಿಗೆ ಗಾಯ

0 55

ಮೂಡಲಗಿ ಜೂ.10 : ಕಾಲೇಜು ಬಸ್‌ಗೆ ಕೆಎಸ್‌ಆರ್‌ಟಿಸಿಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು  ವಿದ್ಯಾರ್ಥಿಗಳು ಸೇರಿದಂತೆ 19ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಗುರ್ಲಾಪೂರದ ಸಮೀಪ ಗುರುವಾರ ಬೆಳಿಗ್ಗೆ ನಡೆದಿದೆ

   ಗುರ್ಲಾಪೂರದ ಜತ್ತ- ಜಾಂಬೋಟಿ ಹೆದ್ದಾರಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಂತಿದ್ದ ಕಾಲೇಜ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳೀಯ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ನಲ್ಲಿದ್ದ ವಿದ್ಯಾರ್ಥಿಗಳಿಗೆ ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಎಚ್ ವಾಯ್ ಬಾಲದಂಡಿ ಹಾಗೂ ಸಿಬ್ಬಂದಿ ವರ್ಗ ಹಾಜರಾಗಿ ಸ್ಥಳ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

You might also like
Leave a comment