ಚಾಮರಾಜನಗರದಲ್ಲಿ ಗಲಾಟೆ: ಮತಯಂತ್ರ ಧ್ವಂಸ, ಮಾಡಿದ ಲಾಠಿ ಚಾರ್ಜ್

Ravi Talawar
WhatsApp Group Join Now
Telegram Group Join Now

ಚಾಮರಾಜನಗರ, (ಏಪ್ರಿಲ್ 26): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ  ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

 

WhatsApp Group Join Now
Telegram Group Join Now
Share This Article