This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಹಗರಿ ಅರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಆಧಿಕಾರಿಗಳ ದಾಳಿ


ಬಳ್ಳಾರಿ,ಸೆ,೩೦: ಲೋಕಾಯುಕ್ತ ಪೊಲೀಸ್‌ರು ರಾಜ್ಯದ್ಯಂತ ನಡೆಸಿರುವಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿವೂ ಏಕಕಾಲಕ್ಕೆ ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್ಗಳ ಮೇಲೆ ಬೆಳಗಿ ಜಾವ ದಾಳಿ ನಡೆಸಿದ್ದಾರೆ.

ಆಂಧ್ರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿರುವ ಗೋಡೆಹಾಳ್ನಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಪುರುಷೋತ್ತಮ, ಡಿವೈ ಎಸ್ಪಿ ರಾಮರಾವ್ ನೇತೃತ್ವದ ತಂಡ ಬೆಳಿಗ್ಗೆ ೪.೩೦ ಗಂಟೆಗೆ ದಾಳಿ ಮಾಡಿ, ಎರಡುವರೆ ತಾಸುಗಳ ಕಾಲ ದಾಖಲೆಗಳ ಪರಿಶೀಲನೆ ನಡೆಯಿತು. ಈ ಸಂದರ್ಭದಲ್ಲಿ ಹಣ ಮತ್ತು ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಲೋಕಾಯುಕ್ತ ದಾಳಿ ಮಾಡಿತ್ತು.

ಆಂಧ್ರಪ್ರದೇಶದ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿರುವ ಹಗರಿ ಚೆಕ್‌ಪೋಸ್ಟ್ನಲ್ಲಿ ಗಡಿಭಾಗದಿಂದ ನಿತ್ಯ ನೂರಾರು ವಾಹನಗಳು ಬಳ್ಳಾರಿಗೆ ಎಂಟ್ರಿ ಕೊಡುತ್ತವೆ, ಇವುಗಳ ದಾಖಲೆ ಗಳ ಪರಿಶೀಲನೆಯ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ. ದಾಖಲೆಗಳನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ತಪಾಸಣೆಯ ನೆಪದಲ್ಲಿ ಹಣ ಪಡೆಯುತ್ತಾರೆಂಬ ಎಂಬ ಆರೋಪದ ಹಿನ್ನಲೆ ಯಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಬಳ್ಳಾರಿಯಿಂದ ೧೨ ಕಿ.ಮೀ ದೂರದಲ್ಲಿರುವ ಚೆಕ್‌ಪೋಸ್ಟ್ ಈ ಮೊದಲು ಗಣಿಗಾರಿಕೆ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಮತ್ತು ಆರ್ಟಿಓ ಒಳಗೊಂಡAತೆ ಕಾಂಪೋಜಿಟ್ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕೆಲ ವರ್ಷಗಳಿಂದ ಇಲ್ಲಿ ಅರಣ್ಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ತನ್ನ ಸಿಬ್ಬಂದಿಯನ್ನು ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ ಇಲ್ಲಿ ಆರ್‌ಟಿಒ ಅಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದರು.ಬೆಳಿಗ್ಗೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳ ತಂಡವು ಅಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸಿದೆ, ದಾಖಲೆ ಸೇರಿದಂತೆ ಇತರ ವಿಷಯದ ಕುರಿತಾಗಿ ಪರಿಶೀಲನೆ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಹಣವು ಸಿಕ್ಕಿದ್ದು, ಅಲ್ಲಿನ ಸಿಬ್ಬಂದಿಗಳನ್ನು ವಶಕ್ಕೆ ಪಡೆದು ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.

ದಾಳಿಯ ಸಂದರ್ಭದಲ್ಲಿ ಇನ್ಸ್ಪೇಟರ್ ರಫೀಕ್ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ೧೨ ಜನರ ಇದ್ದರೆಂದು ತಿಳಿದುಬಂದಿದೆ.


Leave a Reply