ಡಿಕೆ ಶಿವಕುಮಾರ್​ಗೆ ಲೋಕಾಯುಕ್ತ ಶಾಕ್: ಚುನಾವಣೆ ಹೊತ್ತಲ್ಲೇ ನೋಟಿಸ್

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 11: 2013ರ ಏಪ್ರಿಲ್ 1ರಿಂದ 2018ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ. ಇದರಿಂದ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್​ನಲ್ಲಿ ಸೂಚಿಸಿದೆ.

ಇದೇ ಆಸ್ತಿ ಗಳಿಕೆ ಆರೋಪದಡಿ ಡಿಕೆ ಶಿವಕುಮಾರ್ ವಿರುದ್ಧ 2020ರ ಅಕ್ಟೋಬರ್ 03ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಆದ್ರೆ, ಈ ಹಿಂದೆ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಈ ಪ್ರಕರಣದ ತನಿಖೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 2023ರ ನವೆಂಬರ್ 23ರಂರು ಲೋಕಾಯುಕ್ತ ಪೊಲೀಸ್​ ವಿಭಾಗಕ್ಕೆ ವಹಿಸಿತ್ತು. ಬಳಿಕ ಸರ್ಕಾರದ ಆದೇಶದಂತೆ ಲೋಕಾಯುಕ್ತ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿತ್ತು.

2013ರ ಮಾರ್ಚ್ 31ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ 33 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಕುಟುಂಬದ ಆಸ್ತಿ 166.79 ಕೋಟಿ ರೂ.ಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 113.12 ಕೋಟಿ ವಚ್ಚ ಮಾಡಲಾಗಿದೆ ಎಂಬ ಅಂಶ ಸಿಬಿಐ ಎಫ್​ಐಆರ್​ನಲ್ಲಿತ್ತು.

2018ರ ಏ.30ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ 128.60 ಕೋಟಿ ಆಸ್ತಿ ಹೊಂದಿತ್ತು. ವರಮಾನ, ಸ್ವೀಕೃತಿ ಮತ್ತು ವೆಚ್ಚಕ್ಕೆ ಹೋಲಿಸಿದರೆ ಶೇಕಡ 44.93ರಷ್ಟು ಹೆಚ್ಚುವರಿ ಆಸ್ತಿ ಇರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿಬಿಐ, ತನ್ನ ಎಫ್​ಐಆರ್​ನಲ್ಲಿ ಉಲ್ಲೇಖಿಸಿತ್ತು.

WhatsApp Group Join Now
Telegram Group Join Now
Share This Article