Live Stream

September 2022
T F S S M T W
1234567
891011121314
15161718192021
22232425262728
2930  

| Latest Version 8.0.1 |

Local News

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಲ್ಲೋಳಿಯಲ್ಲಿ ಸೆ.೧೭ ರಂದು ಬೃಹತ್ ರಕ್ತದಾನ ಶಿಬಿರ


ಮೂಡಲಗಿ: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಬೆಳಗಾವಿ ಜಿಲ್ಲೆ, ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ ಕಲ್ಲೋಳಿ ಹಾಗೂ ರೋಟರಿ ರಕ್ತ ಭಂಡಾರ ಕೇಂದ್ರ ಗೋಕಾಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದ ಆವರಣದಲ್ಲಿ ಸೆ.೧೭ ರಂದು ಬೆಳಿಗ್ಗೆ ೦೯.೩೦ ಗಂಟೆಗೆ ಬೃಹತ್ ಐಚ್ಛಿಕ ರಕ್ತದಾನ ಶಿಬಿರ ನಡೆಯಲಿದೆ.

ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಶಿಬಿರವನ್ನು ಉದ್ಘಾಟಿಸುವರು. ಸೇವಾ ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಬೆಳಗಾವಿ ಗ್ರಾಮೀಣ ರೈತ ಮೋರ್ಚಾ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ, ರೋಟರಿ ಸಂಸ್ಥೆ ಅಧ್ಯಕ್ಷ ಸತೀಶ ನಾಡಗೌಡ, ರೋಟರಿ ಸಂಸ್ಥೆ ಸದಸ್ಯರಾದ ಬಸವರಾಜ ಹುಳ್ಳೇರ, ವೈಧ್ಯಾಧಿಕಾರಿ ಬಿ. ಆರ್. ಕಪ್ಪಲಗುದ್ದಿ, ಡಾ. ನಂದೀಶ ವರದಾಯಿ, ಸಾಯಿ ಸಮಿತಿ ಸದಸ್ಯ ಸುರೇಶ ಕಬ್ಬೂರ, ಶ್ರೀಶೈಲ ತುಪ್ಪದ, ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ಮೋದಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ವಿನಂತಿಸಲಾಗಿದೆ.

ಕಬಡ್ಡಿ ಪಂದ್ಯಾವಳಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಗ್ರಾಮದ ಯಲ್ಲಾಲಿಂಗ ಮಠದ ಆವರಣದಲ್ಲಿ ಸೆ. ೧೭ರಂದು ಸಂಜೆ ೦೬.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 


S K Muchalambi
the authorS K Muchalambi

Leave a Reply