ನಾವು ಮಾಡಿದ ಅಭಿವೃದ್ಧಿಗೆ ಜನ ಜೈ ಅಂದಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
WhatsApp Group Join Now
Telegram Group Join Now
ಬೆಳಗಾವಿ,ಏಪ್ರಿಲ್ 10:  :  ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಮಾಡಿದ ಸಾಧನೆ, ಜಾರಿಗೆ ತಂದಿರುವ ವಿವಿಧ ಯೋಜನೆ ಮತ್ತು ನಾವು ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಜನರು ಮುಕ್ತಕಂಠದಿಂದ ಪ್ರಶಂಸಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೃಣಾಲ ಹೆಬ್ಬಾಳಕರ್ ಗೆಲುವು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಕ್ಷೇತ್ರದ ವಿವಿಧ ತಾಲೂಕುಗಳಲ್ಲಿ ಎರಡು ಸುತ್ತಿನ ಪ್ರಚಾರ ಕೈಗೊಂಡ ಬಳಿಕ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕುಗಳಲ್ಲಿ  ಪ್ರಚಾರ ಕಾರ್ಯ ನಡೆಸಲಾಗಿದೆ. ಕೆಲವು ತಾಲೂಕುಗಳಲ್ಲಿ ಎರಡು ಸುತ್ತು ಪ್ರಚಾರ ನಡೆಸಲಾಗಿದೆ. ಎಲ್ಲ ಕಡೆ ಕಾರ್ಯಕರ್ತರ ಸಭೆ ಪೂರ್ಣಗೊಂಡಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಮತ್ತು ಅನೇಕ ಕಡೆ ಹೋಬಳಿ ಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಗಿದೆ. ಹೋದಲ್ಲೆಲ್ಲ ಜನರಿಂದ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ಯವಾಗುತ್ತಿದೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಥಳೀಯ ಶಾಸಕರು ಮತ್ತು ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಮೊದಲ ಸುತ್ತಿನಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ನಂತರದಲ್ಲಿ ಮುಖಂಡರ ಜೊತೆ ಜಿಲ್ಲಾ ಪಂಚಾಯಿ ಮಟ್ಟದ ಮತ್ತು ಕೆಲವೆಡೆ ಹೋಬಳಿ ಮಟ್ಟದ ಸಾರ್ವಜನಿಕ ಸಭೆಗಳನ್ನು ನಡೆಸಲಾಗಿದೆ. ಇನ್ನು ಕೆಲವೆಡೆ ರೋಡ್ ಶೋ ನಡೆಸಲಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅವರವರ ವ್ಯಾಪ್ತಿಯಲ್ಲಿ ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾವು ಹೋದಲ್ಲೆಲ್ಲ ಆರತಿ ಬೆಳಗಿ ಸ್ವಾಗತಿಸುತ್ತಿದ್ದಾರೆ. ಊರಲ್ಲೆಲ್ಲ ಮೆರವಣಿಗೆ ಮಾಡಿ ಕಾರ್ಯಕ್ರದ ವೇದಿಕೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಎಲ್ಲಿ ನೋಡಿದರೂ ಹೂವಿನ ಮಳೆಗರೆಯುತ್ತಿದ್ದಾರೆ. ಜನರ ಈ ಪ್ರೀತಿ ನೋಡಿದರೆ ನಮ್ಮ ಅಭ್ಯರ್ಥಿ ಗೆಲುವಿನಲ್ಲಿ ಸಂಶಯವೇ ಇಲ್ಲ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
ಏಪ್ರಿಲ್ 15ರಂದು ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸಲಿದ್ದಾರೆ. ನಂತರದಲ್ಲಿ ಮತ್ತೊಂದು ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ರಾಜ್ಯಮಟ್ಟದ ನಾಯಕರು ಸಹ ಪ್ರಚಾರಕ್ಕೆ ಬರಲಿದ್ದಾರೆ. ಬದಲಾವಣೆಗಾಗಿ, ಬೆಳಗಾವಿಯ ಸಮಗ್ರ ಅಭಿವೃದ್ಧಿಗಾಗಿ, ಯುವಜನರಿಗೆ ಉದ್ಯೋಗ ಸೃಷ್ಟಿಗಾಗಿ, ಕ್ಷೇತ್ರಕ್ಕೆ ಹೆಚ್ಚಿನ ಉದ್ಯಮ, ಉದ್ಯೋಗ ತರುವುದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಅವರನ್ನು ಬೆಂಬಲಿಸಬೇಕು ಎಂದು ನಾನು ಜನರಲ್ಲಿ ಕೈಮುಗಿದು ಕೇಳುತ್ತೇನೆ. ಎಲ್ಲರೂ ಸೇರಿ ಬೆಳಗಾವಿಯನ್ನು ಜನಸ್ನೇಹಿಯಾಗಿ ಅಭಿವೃದ್ಧಿಪಡಿಸೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದ್ದಾರೆ.
WhatsApp Group Join Now
Telegram Group Join Now
Share This Article