ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ

Ravi Talawar
WhatsApp Group Join Now
Telegram Group Join Now
ಕಾಗವಾಡ29: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಳೆ ಐತಿಹಾಸಿಕ ಕಾರ್ಯಕ್ರಮ ಉಗಾರದಲ್ಲಿ ನಡೆಯುತ್ತಿದ್ದೆ ಎಂದ ಸಚಿವರು, ನಾವು ಕಳೆದ 30 ವರ್ಷಗಳಿಂದ ಮಾಡಿದ ಅಭಿವೃದ್ಧಿ ಕೆಲಸಗಳನ್ನೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು  ಕಂಡಿತವಾಗಿ ಪರಿಣಾಮ ಬೀರುತ್ತವೆ. ಅದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ 18 ಜನ ಸ್ಪರ್ಧೆಯಲ್ಲಿ ಇದ್ದಾರೆ. ಅದರಲ್ಲಿ ಎರಡು ಜನ ಮಾತ್ರ ರಾಷ್ಟ್ರೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಇನ್ನು ಸ್ವಾತಂತ್ರ್ಯ ಅಭ್ಯರ್ಥಿಗಳ ಸ್ಪರ್ಧೆ ಬಗ್ಗೆ ಚರ್ಚಿಸುವ ಅವಶಕತೆ ನಮಗಿಲ್ಲ ಎಂದರು.
ಹೆಲಿಪ್ಯಾಡ್ ಸ್ಥಳ ಪರಿಶೀಲನೆ:  ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಮಂಗಸೂಳಿ ಲಕ್ಷ್ಮೀ  ನಗರದಲ್ಲಿ ನಿರ್ಮಿಸಿದ ಹೆಲಿಪ್ಯಾಡ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜು ಕಾಗೆ, ಕಾಂಗ್ರೆಸ್ ಮುಖಂಡರಾದ ರಮೇಶ ಸಿಂದಗಿ, ಅಬಿಬ್ ಶಿಲ್ಲೇದಾರ್, ದಿಗ್ವಿಜಯ ಪವಾರ್, ರಾವಸಾಬ್ ಐಹೊಳೆ ಸೇರಿದಂತೆ ಹಲವರು ಇದ್ದರು.
WhatsApp Group Join Now
Telegram Group Join Now
Share This Article