ಬೆಂಗಳೂರು ಜು., 22- ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಬೆಲೆ ಏರಿಕೆಯೂ ಆಗಸ್ಟ್ ಒಂದರಿಂದ ಜಾರಿಗೆ ಬರಲಿದೆ.
ಗ್ರಹ ಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಹಾಲು ಒಕ್ಕೂಟಗಳ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಪದಾಧಿಕಾರಿಗಳ ಸಭೆಯಲ್ಲಿ ಬೆಲೆ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಈ ಸಭೆಯಲ್ಲಿ ಪಶು ಸಂಗೋಪನ ಸಚಿವ ವೆಂಕಟೇಶ್, ಸಹಕಾರ ಸಚಿವ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಭೀಮ ನಾಯಕ್, ಎಚ್ ಡಿ ರೇವಣ್ಣ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು.
ಈ ಹಿಂದೆ ಕೆಎಂಎಫ್ ಹಾಲಿನ ದರ 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇಂದು ನಡೆದ ಸಭೆಯಲ್ಲಿ ಸರ್ಕಾರವು ಎಲ್ಲ ಮಾದರಿಯ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳಕ್ಕೆ ಹಸಿರು ನಿಶಾನೆ ತೋರಿದೆ.