This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ರಾಜ್ಯಮಟ್ಟದ ಕಿತ್ತೂರು ಉತ್ಸವದ ಯಶಸ್ಸಿಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ 


ಬೆಳಗಾವಿ, ಅ.20 :-  ಇದೇ ಮೊದಲ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿರುವುದರಿಂದ ಪ್ರತಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಒಟ್ಟು 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಮಾತ್ರವಲ್ಲದೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರನ್ನು ಕೂಡ ಉತ್ಸವದ ಕೆಲಸಕ್ಕೆ ನಿಯೋಜಿಸಲಾಗಿದೆ.

ಎಲ್ಲ ಉಪ ಸಮಿತಿಯ ಅಧ್ಯಕ್ಷರು ಮುಂದಿನ ಐದು ದಿನಗಳ ಕಾಲ ಕಿತ್ತೂರಿನಲ್ಲಿಯೇ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನ‌ಲ್ಲಿ ಗುರುವಾರ(ಅ.20) ಉತ್ಸವದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ನಂತರ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ನಡೆದ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈ ಬಾರಿ ಮೂರು ವೇದಿಕೆಗಳಿರುವುದರಿಂದ ಮುಖ್ಯ ವೇದಿಕೆ, ಸಾಂಸ್ಕೃತಿಕ, ಕ್ರೀಡೆ, ವಸ್ತುಪ್ರದರ್ಶನ ಸೇರಿದಂತೆ ಎಲ್ಲ ಸಮಿತಿಯವರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಉಪ ಸಮಿತಿಗಳು ತಮ್ಮ ಕೆಲಸಕಾರ್ಯ ನಿರ್ವಹಣೆಗೆ ಅಗತ್ಯ ಅಧಿಕಾರಿಗಳು/ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸ್ವಾತಂತ್ರ್ಯ ಯೋಧರು, ಸಾಹಿತಿಗಳು, ಕಲಾವಿದರು, ಗಣ್ಯರು ಸೇರಿದಂತೆ ಎಲ್ಲರಿಗೂ ಉತ್ಸವದ ಆಹ್ವಾನಪತ್ರಗಳನ್ನು ತಲುಪಿಸಬೇಕು ಎಂದು ಎಲ್ಲ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಇದಲ್ಲದೇ ಉತ್ಸವಕ್ಕೆ ಆಗಮಿಸುವ ಗಣ್ಯರು, ಕಲಾವಿದರು ಸೇರಿದಂತೆ ಎಲ್ಲರಿಗೂ ಸೂಕ್ತ ವಸತಿ, ಊಟೋಪಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ಕಲ್ಪಿಸಬೇಕು.

ಪ್ರತಿ ತಾಲ್ಲೂಕುಗಳ ರೂಪಕ ನಿರ್ಮಿಸಲು ಸೂಚನೆ:ಜಿಲ್ಲೆಯ ಎಲ್ಲ ತಾಲ್ಲೂಕುಗಳ ವೈಶಿಷ್ಟ್ಯ ಬಿಂಬಿಸುವಂತಹ ರೂಪಕಗಳನ್ನು ಆಯಾ ತಾಲ್ಲೂಕು ಪಂಚಾಯತ ವತಿಯಿಂದ ನಿರ್ಮಿಸಿಕೊಂಡು ಉತ್ಸವದ ಉದ್ಘಾಟನಾ ದಿನ ಬೆಳಿಗ್ಗೆ ನಡೆಯಲಿರುವ ಮೆರವಣಿಗೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಅದೇ ರೀತಿ ಪ್ರತಿ ತಾಲ್ಲೂಕಿನಿಂದ ಎರಡು ಸಾಂಸ್ಕೃತಿಕ ಕಲಾತಂಡಗಳು ಕೂಡ ಭಾಗವಹಿಸಲಿವೆ ಎಂದರು.

ಉತ್ಸವದ ಸಂದರ್ಭದಲ್ಲಿ ಜನರಿಗೆ ತುರ್ತು ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ‌ಅಶೋಕ ದುಡಗುಂಟಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕರಾದ ಈಶ್ವರ್ ಉಳ್ಳಾಗಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಉಪ ಸಮಿತಿಯ ಅಧ್ಯಕ್ಷರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Leave a Reply