ಸಚಿವ ಜೋಶಿ ವಿರುದ್ಧ ಫಕೀರ ದಿಂಗಾಲೇಶ್ವರ ಶ್ರೀ ಸ್ಪರ್ಧೆ: ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಬ್ರಹ್ಮಣ vs ಲಿಂಗಾಯತ

Ravi Talawar
WhatsApp Group Join Now
Telegram Group Join Now

ಧಾರವಾಡ,ಏಪ್ರಿಲ್​ 08:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ  ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ತೀನಿ ಎಂದು ಫಕೀರ ದಿಂಗಾಲೇಶ್ವರ ಶ್ರೀ  ಘೋಷಿಸಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ದಿಂಗಾಲೇಶ್ವರ ಲಿಂಗಾಯತ ಶ್ರೀಗಳು ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್‌ ವಿನೋದ್‌ ಅಸೂಟಿಯನ್ನು ಕಣಕ್ಕಿಳಿಸಿದೆ. ಇದರ ನಡುವೆ ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿಗಳು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಇದರಿಂದ ಲಿಂಗಾಯತ ಮತಗಳು ವಿಭಜನೆಯಾಗಿ ಪ್ರಹ್ಲಾದ್‌ ಜೋಶಿ ಗೆಲುವು ಕಷ್ಟ ಆಗಬಹುದು ಎನ್ನಲಾಗಿದೆ.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮಿ ಬಹಿರಂಗವಾಗಿಯೇ ಹೇಳಿದ್ದು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದರು. ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿತ್ತು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ ಎಂದು ಹೇಳಿದ್ದರು.

 

WhatsApp Group Join Now
Telegram Group Join Now
Share This Article