ಹೈದರಾಬಾದ್:
250 ಯುನಿಟ್ವರೆಗೆ ಮುಸ್ಲಿಂ ಸಮುದಾಯದ ಧೋಬಿಗಳಿಗೆ ವಿದ್ಯುತ್ ಫ್ರೀ ಎಂದು ಘೋಷಣೆ ಮಾಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡಿ ಸಂಜೀವಕುಮಾರ ಖಂಡಿಸಿದ್ದಾರೆ.
ತೆಲಂಗಾಣದಲ್ಲಿ ಧೋಬಿ ಘಾಟ್ಗಳಲ್ಲಿ ಬಟ್ಟೆ ತೊಳೆಯುವ ಹಾಗೂ ಇಸ್ತ್ರಿ ಅಂಗಡಿ ಇಟ್ಟುಕೊಂಡಿರುವ ಇತರೆ ಹಿಂದುಳಿದ ವರ್ಗದವರಿಗೆ 250 ಯುನಿಟ್ವರೆಗೆ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡಲಾಗಿದೆ. ಈಗ ಈ ಸೌಲಭ್ಯವನ್ನು ಮುಸ್ಲಿಂ ಸಮುದಾಯದವರಿಗೆ ವಿಸ್ತರಣೆ ಮಾಡಿರುವುದು ಬಿಜೆಪಿ ಖಂಡನೆಗೆ ಕಾರಣವಾಗಿದೆ.
ಮುಸ್ಲಿಂ ಸಮುದಾಯದ ಧೋಬಿಗಳಿಗೆ ಇಸ್ತ್ರಿ ಅಂಗಡಿ ಇಟ್ಟುಕೊಂಡಿರುವವರಿಗೆ ತೆಲಂಗಾಣ ಸರ್ಕಾರ 250 ಯುನಿಟ್ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ, ಕೆ. ಚಂದ್ರಶೇಖರ ರಾವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಖಂಡಿಸಿದೆ.
ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು
ಮುಸ್ಲಿಂ ಸಮುದಾಯದವರೂ ಧೋಬಿ ಘಾಟ್ಗಳಲ್ಲಿ ಕೆಲಸ ಮಾಡುತ್ತಾರೆ. ಅವರು ಕೂಡ ಇಸ್ತ್ರಿ ಅಂಗಡಿಗಳನ್ನು ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಅವರಿಗೂ ಕೂಡ ಉಚಿತ ವಿದ್ಯುತ್ ಸೌಲಭ್ಯ ವಿಸ್ತರಣೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಸ್ಪಂದಿಸಿದ ಸಿಎಂ ಕೂಡಲೇ ಮುಸ್ಲಿಂ ಸಮುದಾಯದ ಧೋಬಿಗಳಿಗೆ ಯೋಜನೆ ಅನ್ವಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.