ಏ.16 ಮಂಗಳವಾರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ : ಬೃಹತ್ ರ್ಯಾಲಿ ಹಾಗೂ ಸಮಾವೇಶ

Ravi Talawar
WhatsApp Group Join Now
Telegram Group Join Now

ವಿಜಯಪುರ, ಏಪ್ರಿಲ್ 15:  : ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏ.16 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ  ಕಾರ್ಯಕರ್ತರೊಂದಿಗೆ‌‌ ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ‌ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 12 ಕ್ಕೆ ಸ್ಟೇಶನ್ ರಸ್ತೆಯ ದರ್ಬಾರ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್‌ ಕುಚಬಾಳ ಪ್ರಕಟಣೆಯಲ್ಲಿ ತೀಳಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆ‌ ವಿಶೇಷವಾಗಿ ರಾಜ್ಯ ಬಿಜೆಪಿ ನಾಯಕರುಗಳಾದ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಲಬುರ್ಗಿ ಸಂಸದ ಉಮೇಶ ಜಾಧವ, ನಾರಾಯಣಸಾ ಭಾಂಡಗೆ, ಹಾಲಪ್ಪ ಆಚಾರ, ಜಗದೀಶ ಹಿರೇಮನಿ ಭಾಗಿಯಾಗಲಿದ್ದಾರೆ. ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ‌ ನಾಯಕರು, ಪ್ರಮುಖರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶೋಭಾಯಾತ್ರೆ ಮತ್ತು ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಶಕ್ತಿ ತುಂಬಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article