ಆಕ್ಷೇಪಣೆ ಸಲ್ಲಿಸಲು ಅವಕಾಶ

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಮೇ 09 ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆಗಳಿಗೆ ಪ್ರತಿ ವರ್ಷ ಉದ್ದಿಮೆ ಪರವಾನಿಗೆಯನ್ನು ಪಡೆಯಲು 2024-25 ನೇ ಸಾಲಿಗೆ ಪರಿಷ್ಕøತ ದರಗಳನ್ನು ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.

ದರಗಳಿಗೆ ಆಕ್ಷೇಪಣೆಗಳು ಹಾಗೂ ಸಲಹೆ ಸೂಚನೆಗಳನ್ನು ಪಡೆಯಲು https://erajyapatra.karnataka.gov.in/WriteReadData/2024/7185.pdf ಕರ್ನಾಟಕ ರಾಜ್ಯ ಪತ್ರದಲ್ಲಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ, ಭೇಟಿ ನೀಡಿ ನೋಡಬಹುದು.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗದಿದ್ದಲ್ಲಿ ದರಗಳನ್ನು ಅಂತಿಮಗೊಳಿಸಲಾಗುವುದು ಹಾಗೂ ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ  ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article