47 ವೈದ್ಯಕೀಯ ​ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥ: ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ

Ravi Talawar
WhatsApp Group Join Now
Telegram Group Join Now

ಬೆಂಗಳೂರು,ಏ.06: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (BMCRI) ಮಹಿಳಾ ಹಾಸ್ಟೆಲ್​ನ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ.

ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ 47 ವೈದ್ಯಕೀಯ ​ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲರಾದ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಮಾದರಿಯನ್ನು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಇನ್ನು ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ ಅವರು, ಬಿಎಂಸಿಆರ್‌ಐ ಹಾಸ್ಟೆಲ್ ನಲ್ಲಿ ಕನಿಷ್ಠ ಸ್ವಚ್ಛತೆಯಿಲ್ಲದ ಬಗ್ಗೆ ಹಲವು ಬಾರಿ ದೂರು ವಿದ್ಯಾರ್ಥಿಗಳು ನೀಡಿದ್ದಾರೆ. ಯಾವುದು ಸರಿಯಾಗಿಲ್ಲ. ಈ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಒಂದು ವಾರದಲ್ಲಿ ವರದಿಯನ್ನು ಕೊಡಬೇಕು. ಅಲ್ಲದೆ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದಲ್ಲಿ ಈ ವರ್ಷ ಇದುವರೆಗೆ ಆರು ಕಾಲರಾ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಐದು ಮಾರ್ಚ್‌ನಲ್ಲಿ ವರದಿಯಾಗಿದೆ. ನೀರಿನ ಬಿಕ್ಕಟ್ಟಿನೊಂದಿಗೆ ತೀವ್ರವಾದ ಶಾಖವು ಕಾಲರಾ ಏಕಾಏಕಿ ಭೀತಿಗೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article