ಪ್ರಜ್ವಲ್ ರೇವಣ್ಣ ಕೇಸ್: ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್, ಮೂವರ ವಿರುದ್ಧ ಎಫ್​​ಐಆರ್

Ravi Talawar
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್ 30: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ತನಿಖೆ ನಡೆಸಿದೆ.

ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.

ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್​ಬುಕ್, ಯೂಟ್ಯೂಬ್, ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಹಿಂದೆಯೇ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆ ಅಶ್ಲೀಲ ಚಿತ್ರ  ಜೋಡಿಸಿ ವೈರಲ್ ಮಾಡಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿಕೆ ಶಿವಕುಮಾರ್ ಅವರ ಎಡಿಟೆಡ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಜೆಡಿಎಸ್​, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಅಂತಿಮವಾಗಿ ಕೆಪಿಸಿಸಿ ಕಾನೂನು ಘಟಕ ಫೋಟೋ ಶೇರ್ ಮಾಡಿದ್ದವರ ವಿರುದ್ಧ ದೂರು ದಾಖಲಿಸಿದೆ.

 

WhatsApp Group Join Now
Telegram Group Join Now
Share This Article