ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮೂರನೇ ‘ಫ್ಯೂಸ್’ ಆಫ್ ಆಗಿದೆ: ಪ್ರಧಾನಿ ನರೇಂದ್ರ ಮೋದಿ

Ravi Talawar
WhatsApp Group Join Now
Telegram Group Join Now

ಹೈದರಾಬಾದ್: ದೇಶದಲ್ಲಿ ಮೂರನೇ ಹಂತದ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮೂರನೇ ‘ಫ್ಯೂಸ್’ ಆಫ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ವೇಮುಲವಾಡದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ದೇಶದಲ್ಲಿ ನಾಲ್ಕು ಹಂತದ ಮತದಾನ ಬಾಕಿ ಉಳಿದಿದ್ದು, ಜನರ ಆಶೀರ್ವಾದದಿಂದ ಬಿಜೆಪಿ ಮತ್ತು ಎನ್‌ಡಿಎ ಗೆಲುವಿನತ್ತ ಸಾಗುತ್ತಿದೆ. ದೇಶದಲ್ಲಿ ನಡೆದ ಮೂರನೇ ಹಂತದ ಚುನಾವಣೆಯ ನಂತರ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮೂರನೇ ಫ್ಯೂಸ್ ಆಫ್ ಆಗಿದೆ’ ಎಂದು ಮೋದಿ ವಿರೋಧ ಪಕ್ಷಗಳನ್ನು ಲೇವಡಿ ಮಾಡಿದರು.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಬಿಜೆಪಿಯು ‘ರಾಷ್ಟ್ರ ಮೊದಲು’ ತತ್ವವನ್ನು ನಂಬಿದರೆ, ಕಾಂಗ್ರೆಸ್ ಮತ್ತು ಬಿಆರ್‌ಎಸ್‌ಗೆ ‘ಕುಟುಂಬ ಮೊದಲು’ ಎಂಬುದು ತತ್ವವಾಗಿದೆ ಎಂದು ಹೇಳಿದರು.

ಬಿಆರ್‌ಎಸ್‌ ಮತ್ತು ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಪರಸ್ಪರ ಟೀಕಿಸಿಕೊಳ್ಳುತ್ತವೆ. ಆದರೆ, ಇದು ಈ ಪಕ್ಷಗಳ ನಡುವಿನ ಸಾಮಾನ್ಯ ಅಂಶವಾಗಿದೆ. ಕಾಂಗ್ರೆಸ್ ಐದು ವರ್ಷಗಳಿಂದ ಅದಾನಿ ಮತ್ತು ಅಂಬಾನಿ ಹೆಸರನ್ನು ಜಪಿಸುತ್ತಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಅದನ್ನು ನಿಲ್ಲಿಸಿದೆ ಎಂದು ಆರೋಪಿಸಿದ ಮೋದಿ, ಹಳೆಯ ಪಕ್ಷವು ದೇಶಕ್ಕೆ ಈ ಬಗ್ಗೆ ಉತ್ತರಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಡಬಲ್ ಆರ್ (ಆರ್‌ಆರ್) ತೆರಿಗೆ ಕುರಿತು ದೆಹಲಿಯವರೆಗೂ ಸಾಕಷ್ಟು ಚರ್ಚೆ ನಡೆಯುತ್ತಿದೆ ಎಂದರು.

WhatsApp Group Join Now
Telegram Group Join Now
Share This Article