This is the title of the web page

ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಹಂತಕರನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಒಳಪಡಿಸಲು ಸರಕಾರಕ್ಕೆ ಆಗ್ರಹ....

0 44

ಮೂಡಲಗಿ ಜು.28 : ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆಯಿಂದ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದ್ದು, ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಸರ್ಕಾರದಲ್ಲೇ ರಕ್ಷಣೆ ಇಲ್ಲವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಾಲೂಕ ಅಧ್ಯಕ್ಷ ಪ್ರಕಾಶ ಮಾದರ ಹೇಳಿದರು.

ಗುರುವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹಿಂದೂ ಪರ ಸಂಘಟನೆಗಳಿಂದ, ಹತ್ಯೆಯನ್ನು ಖಂಡಿಸಿ, ಪ್ರತಿಭಟನೆ ಮಾಡುತ್ತ, ತಹಶೀಲ್ದಾರ ಹಾಗೂ ಸಿ.ಪಿ.ಐ ಮೂಡಲಗಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಶಿವಮೊಗ್ಗದ ಹರ್ಷ ಕೊಲೆಯ ಬಳಿಕ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯು ಕಾರ್ಯಕರ್ತರಲ್ಲಿ ವ್ಯಾಪಕ ಆಸಮಾಧಾನವಾಗಿದ್ದು, ರಾಜ್ಯ ಬಿಜೆಪಿ ಸರಕಾರ ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು, ಕೊಲೆಗೈದ ಹಂತಕರನ್ನು ಬಂಧಿಸಿ ಕಠಿಣ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಹಿಂದೂ ಸಂಘಟನೆಯಲ್ಲಿ ತೊಡಗಿರೋ ಯುವಕರಿಗೆ ಸೂಕ್ತ ಭದ್ರತೆ ಒದಗಿಸಬೇಕು ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಮತಾಂಧ ಶಕ್ತಿಗಳನ್ನು ಗುರುತಿಸಿ ಅವರನ್ನು ಕಾನೂನು ಕ್ರಮಕ್ಕೆ ಒಳ ಪಡಿಸುವಂತೆ, ರಾಜ್ಯ ಸರ್ಕಾರ ಪೊಲೀಸ ಇಲಾಖೆಗೆ ಆದೇಶಿಸಬೇಕು ಮತ್ತು ಹತ್ಯೆಯಾದ ಪ್ರವೀಣ ನೆಟ್ಟಾರು ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಹೇಳಿದರು.ಈ ಸಂಧರ್ಭದಲ್ಲಿ ಪಟ್ಟಣದ ಎಲ್ಲ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

You might also like
Leave a comment