ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ: ರಾಹುಲ್‌ ಗಾಂಧಿ

Ravi Talawar
WhatsApp Group Join Now
Telegram Group Join Now

ಮಂಡ್ಯ, ಏಪ್ರಿಲ್​ 17: ನಾವು ಅಧಿಕಾರಕ್ಕೆ ಬಂದರೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂ. ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್  ಸಮಾವೇಶದಲ್ಲಿ ಮಾತನಾಡಿದ ಅವರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರು, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ಕಂಡಿದ್ದೇನೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article