ರಾಜ್ಯಾದ್ಯಂತ ಮಳೆ: ಜನರ ಮೊಗದಲ್ಲಿ ಮಂದಹಾಸ

Hasiru Kranti
WhatsApp Group Join Now
Telegram Group Join Now

ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಮಳೆ : ಹವಾಮಾನ ಇಲಾಖೆ

ಬೆಂಗಳೂರು ಏ., ೨೦- ಕಳೆದ ೪-೫ ವರ್ಷದಿಂದ ಬೆಂಗಳೂರು & ಕರ್ನಾಟಕದ ಜನರನ್ನು ಬೆಚ್ಚಿ ಬಿಳಿಸಿದ್ದ ಭಾರಿ ಮಳೆ ಕಳೆದ ವರ್ಷ ನಾಪತ್ತೆ ಆಗಿತ್ತು. ಬೇಸಿಗೆ ಸಮಯದಲ್ಲಿ ಬಿದ್ದು ಕರ್ನಾಟಕಕ್ಕೆ ತಂಪೆರದಿದ್ದ ಒಂದೆರಡು ಮಳೆ ಮಾತ್ರ, ಆದರೆ ಜೂನ್ ತಿಂಗಳಲ್ಲೇ ಕರ್ನಾಟಕದಲ್ಲಿ ಮಳೆ ಕೊರತೆ ಉಂಟಾಗಿ ಆತಂಕ ಹುಟ್ಟಿಸಿತ್ತು. ಈ ವರ್ಷ ಮುಂಗಾರು ಮಳೆಯ ಮಳೆಯ ಅಬ್ಬರ ಶುರುವಾಗಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಮುಂಗಾರು ಮಳೆ ಕೈಕೊಟ್ಟ ಕಾರಣ ೨೦೨೩ ರಲ್ಲಿ ಬರದ ಬೇಗೆಯಲ್ಲಿ ಕರ್ನಾಟಕ ಜನರು ಬೆಂದು ಹೋಗಿ ನೀರಿಗಾಗಿ ಪರದಾಡಿದ್ದಾರೆ. ಕಳೆದ ವರ್ಷ ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ಈ ಬಾರಿ ಬೇಸಿಗೆ ಆರಂಭಕ್ಕೆ ಮೊದಲೇ, ಹನಿ ಹನಿ ನೀರಿಗೂ ಪರದಾಟ ಶುರುವಾಗಿತ್ತು. ಕುಡಿವ ನೀರು ಒದಗಿಸಲು ಸರ್ಕಾರ ಪರದಾಡುತ್ತಿದೆ. ಹೀಗಿದ್ದಾಗ ಮಳೆರಾಯ ಕನ್ನಡಗರ ಮೇಲೆ ಕರುಣೆ ತೋರಿಸಿ ಮಳೆ ಬರಿಸಿದ್ದಾನೆ.
ಮಳೆ.. ಮಳೆ.. ಕರ್ನಾಟಕದಲ್ಲಿ ಮಳೆ!
ಕರ್ನಾಟಕದ ಕರಾವಳಿ ಜಿಲ್ಲೆಯು ಸೇರಿದಂತೆ ಬೆಂಗಳೂರು ನಗರ & ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಕರ್ನಾಟಕದ ವಿದ್ಯಾಕಾಶಿ ಧಾರವಾಡ & ಹುಬ್ಬಳ್ಳಿಯಲ್ಲಿ ಭಾರಿ ಮಳೆ ತಂಪೆರದಿದ್ದು, ಗದಗ ಜಿಲ್ಲೆಯ ಜನರು ಕೂಡ ಭಾರಿ ಮಳೆಯಿಂದ ಖುಷಿಯಾಗಿ ಕುಣಿದಾಡಿದ್ದಾರೆ.

ಕರ್ನಾಟಕದ ಹಾಸನ, ಕೊಡಗು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆಯು ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗುತ್ತಿದ್ದು, ಈ ಮೂಲಕ ನೆಮ್ಮದಿ ಮೂಡಿದೆ. ಕರಾವಳಿಯ ಪ್ರದೇಶಗಳು ಸೇರಿ ಈಗ ಉತ್ತರ ಕನ್ನಡ, ದಕ್ಷಿಣ ಕನ್ನಡ & ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗದ ಹಲವು ತಾಲೂಕುಗಳು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಮಳೆ ಆರ್ಭಟಿಸಿದೆ.
ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಏ.೨೨ ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

WhatsApp Group Join Now
Telegram Group Join Now
Share This Article