This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ರಾಜ್ಯೋತ್ಸವ ಸನ್ಮಾನ: ಕನ್ನಡಪರ ಹೋರಾಟಗಾರರ ಮಾಹಿತಿ ಸಲ್ಲಿಸಲು ಅವಕಾಶ


ಬೆಳಗಾವಿ, ಅ.21: ಕನ್ನಡ ಪರ ಹೋರಾಟಗಾರರು ಹಾಗೂ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ, ಗೌರವಿಸಲು ನಿರ್ಧರಿಸಲಾಗಿರುತ್ತದೆ.

ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಉಪ ಸಮಿತಿಯನ್ನು ರಚಿಸಲಾಗಿರುತ್ತದೆ.

ಸದರಿ ಸಮಿತಿಯಲ್ಲಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರಾಗಿದ್ದಾರೆ.

ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸುತ್ತಿರುವವರು ಅಕ್ಟೋಬರ್ 25 ರ ಒಳಗಾಗಿ ಬೆಳಗಾವಿ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಸ್ವ-ವಿವರ ಹಾಗೂ ಸಂಪರ್ಕ ಮಾಹಿತಿಯನ್ನು ಸಲ್ಲಿಸಲು ಕೋರಲಾಗಿದೆ.

ಸದರಿ ಮಾಹಿತಿಯನ್ನು ಸಭೆಯಲ್ಲಿ ಚರ್ಚಿಸಿ ಐದು ಜನರನ್ನು ಆಯ್ಕೆ ಮಾಡಲಾಗುವುದು ಎಂದು ಸನ್ಮಾನ ಉಪ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Leave a Reply