ಇದೀಗ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಜೊತೆ ಅವರು  ಕೈ ಜೋಡಿಸಿದ್ದಾರೆ. ಕಲ್ಟ್ ಕಥೆಗಳನ್ನು ಹೇಳಿ ಸಕ್ಸಸ್ ಕಂಡಿರುವ ಅವರೀಗ ಫ್ಯಾಮಿಲಿ ಕತೆಯತ್ತ ವಾಲಿದ್ದಾರೆ. ಹೌದು ಈ ಬಾರಿ ಚಂದ್ರಶೇಖರ್ ಬಂಡಿಯಪ್ಪ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಮಾಡುತ್ತಿದ್ದಾರೆ.
     ಸಹಜ ನಟನೆಯಿಂದಲೇ ಹೆಸರು ಮಾಡಿದವರು ಪೃಥ್ವಿ ಕರಾವಳಿ ಕುವರ ಪರಭಾಷೆಯಲ್ಲಿಯೂ ಮಿಂಚುತ್ತಿದ್ದು, ಇದೀಗ ರಥಾವರ ಡೈರೆಕ್ಟರ್ ಜೊತೆ ಸಿನಿಮಾ ಮಾಡುತ್ತಿರುವುದು ಸಹಜವಾಗಿಯೇ ನಿರೀಕ್ಷೆ ಮೂಡಿಸಿದ .
     ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಹೊಸ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಹೇಳಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.
     ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡದ  ಒಂದೊಂದಾಗಿ ಮಾಹಿತಿ ನೀಡಲಿದೆ.