ಬೆಂಗಳೂರು ಜು., 20- ಸಿದ್ದರಾಮಯ್ಯ ಸಿಎಂ ಆದ ತಕ್ಷಣ ಕುರುಬ ಸಮುದಾಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಏರಿಯಗಳಲ್ಲಿ ಇದ್ದ ಕಾಡು ಕುರುಬರನ್ನ ಮಾತ್ರ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು ಈಗ ರಾಜ್ಯಾದ್ಯಂತ ಇರೋ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳು ನೇತೃತ್ವದಲ್ಲಿ ಲಕ್ಷಾಂತರ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.