ಹೆಚ್.ಡಿ ರೇವಣ್ಣ  ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು

Ravi Talawar
WhatsApp Group Join Now
Telegram Group Join Now

ಹಾಸನ,04: ಮಾಜಿ ಸಚಿವ ಹೆಚ್.ಡಿ ರೇವಣ್ಣ  ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ  ಅಧಿಕಾರಿಗಳು, ಹೊಳೆನರಸೀಪುರದ   ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದರು.

ಡಿವೈಎಸ್‍ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಸ್‍ಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಸ್ಥಳ ಮಹಜರು ವೇಳೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಪೊಲೀಸರು, ಇನ್ಸ್‌ಪೆಕ್ಟರ್‌ ಸುರೇಶ್‍ಕುಮಾರ್ ಹಾಗೂ ಸಬ್‍ಇನ್ಸ್‍ಪೆಕ್ಟರ್ ಅಜಯ್‍ಕುಮಾರ್ ಎಸ್‍ಐಟಿ ತಂಡಕ್ಕೆ ಸಹಕಾರ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಮನೆಯಲ್ಲಿದ್ದ ಸಿಪಿಯು, ಮಾನೀಟರ್, ಪ್ರಿಂಟರ್‌ನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‍ಡ್ರೈವ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದು, ಸರ್ಕಾರ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಇನ್ನೂ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಅವರಿಗೆ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ರೇವಣ್ಣ ಸಹ ವಿದೇಶಕ್ಕೆ ತೆರಳುವ ಶಂಕೆಯ ಮೇಲೆ ಅವರ ಮೇಲೂ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.

WhatsApp Group Join Now
Telegram Group Join Now
Share This Article