ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿಗಳಿಂದ ತಹಸೀಲ್ದಾರಿಗೆ ವಿಶೇಷ ಸೂಚನೆ

Ravi Talawar
WhatsApp Group Join Now
Telegram Group Join Now
ಹೊಸಪೇಟೆ (ವಿಜಯನಗರ) ಏಪ್ರೀಲ್ 06 : ಅತೀ ಹೆಚ್ಚು ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಾರೋಗ್ಯ ತಡೆ ಸೇರಿದಂತೆ ಇನ್ನೀತರ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳತ್ತ ಕೂಡಲೇ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ವಿಜಯನಗರ ಜಿಲ್ಲೆಯ ಎಲ್ಲ ತಾಲೂಕಿನ ತಹಸಿಲ್ದಾರರಿಗೆ ವಿಶೇಷ ಸೂಚನೆ ನೀಡಿದ್ದಾರೆ.
ಅತೀ ಹೆಚ್ಚು ತಾಪಮಾನಕ್ಕೆ ಸಂಬAಧಿಸಿದAತೆ ಐಎಮ್‌ಡಿ ಮತ್ತು ಕೆಎಸ್‌ಎನ್‌ಡಿಎಂಸಿಯಿAದ ನೀಡಿದ ಮುನ್ಸೂಚನೆ ಎಚ್ಚರಿಕೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಐಇಸಿ ಚಟುವಟಿಕೆಗಳನ್ನು ಸಕ್ರಿಯಗೊಳಿಸಬೇಕು. ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಬಸ್ ಟರ್ಮಿನಲ್‌ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸಬೇಕು. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬAಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬAಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆ ನೀಡುವ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಪ್ರಚುರಪಡಿಸಬೇಕು ಸೂಚನೆ ನೀಡಿದ್ದಾರೆ.
ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಂಡು ನೀರಿನ ಲಭ್ಯತೆಗೆ ಏರ್ಪಾಡು ಮಾಡಬೇಕು, ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು. ಸಾಕಷ್ಟು ಓಆರ್‌ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್ ಏರ್ ಕೂಲರ್‌ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ ಸಮಾರಂಭಗಳನ್ನು ಬೆಳಗ್ಗೆ ಅಥವಾ ಸಂಜೆಯ ತಂಪಾದ ವಾತಾವರಣವಿರುವ ಅವಧಿಯಲ್ಲಿ ನಿಗದಿಪಡಿಸಬೇಕು ಎಂಬುದರ ಬಗ್ಗೆ ಕೂಡಲೇ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲ ತಹಸೀಲ್ದಾರಗಳಿಗೆ ವಿಶೇಷ ಸೂಚನೆ ನೀಡಿದ್ದಾರೆ.
WhatsApp Group Join Now
Telegram Group Join Now
Share This Article