ರಾಜಸ್ಥಾನದಲ್ಲಿ ಬೇಹುಗಾರಿಕಾ ವಿಮಾನ ಪತನ

Ravi Talawar
WhatsApp Group Join Now
Telegram Group Join Now

ಜೈಪುರ,25: ಇಂದು ಬೆಳಗ್ಗೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ವಾಯುಪಡೆಯ ಬೇಹುಗಾರಿಕಾ ವಿಮಾನ ಪತನಗೊಂಡಿದೆ. ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿರುವ ರೋಜಾನಿ ಕಿ ಧನಿ ಜಜಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಈ ಬಗ್ಗೆ ಮಾಹಿತಿ ಬಂದ ತಕ್ಷಣ ಜಿಲ್ಲಾಡಳಿತದೊಂದಿಗೆ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತದಿಂದ ವಿಮಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಈ ವಿಮಾನವನ್ನು ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ನಿಯೋಜಿಸಲಾಗಿತ್ತು.

 

 

WhatsApp Group Join Now
Telegram Group Join Now
Share This Article