ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ!

Ravi Talawar
WhatsApp Group Join Now
Telegram Group Join Now

ಬೆಂಗಳೂರು08: ನಾಳೆ(ಗುರುವಾರ) ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

ಮಾರ್ಚ್/ಏಪ್ರಿಲ್ 2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

ಇನ್ನು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

WhatsApp Group Join Now
Telegram Group Join Now
Share This Article