ತೈವಾನ್​ನಲ್ಲಿ ಪ್ರಬಲ ಭೂಕಂಪ: 7.5 ತೀವ್ರತೆಯ ಕಂಪನ, ಸುನಾಮಿ ಎಚ್ಚರಿಕೆ

Ravi Talawar
WhatsApp Group Join Now
Telegram Group Join Now

ತೈವಾನ್​,ಏ.03:  ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ. ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ.

ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ,  ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಚಿತ್ರಗಳನ್ನು ತೋರಿಸಿವೆ. ಶಾಂಘೈ ವರೆಗೂ ಭೂಕಂಪನದ ಅನುಭವವಾಗಿದೆ.

ಚೀನಾದ ಫುಜಿಯಾನ್ ಪ್ರಾಂತ್ಯದ ಫುಝೌ, ಕ್ಸಿಯಾಮೆನ್, ಕ್ವಾನ್‌ಝೌ ಮತ್ತು ನಿಂಗ್ಡೆಯಲ್ಲೂ ಭೂಕಂಪದ ಅನುಭವವಾಗಿದೆ. ತೈವಾನ್‌ನ ಅಧಿಕೃತ ಸೆಂಟ್ರಲ್ ನ್ಯೂಸ್ ಏಜೆನ್ಸಿ ಈ ಭೂಕಂಪವು 1999 ರ ನಂತರ ದ್ವೀಪವನ್ನು ಅಪ್ಪಳಿಸಿದ ಅತಿದೊಡ್ಡ ಭೂಕಂಪವಾಗಿದೆ. 7.6 ತೀವ್ರತೆಯ ಭೂಕಂಪವು ಸುಮಾರು 2,400 ಜನರ ಸಾವಿಗೆ ಕಾರಣವಾಗಿತ್ತು.

WhatsApp Group Join Now
Telegram Group Join Now
Share This Article