ಇಂಡಿ:ವಿದ್ಯಾರ್ಥಿಗಳು ಆಸಕ್ತಿ, ಸಮಯ ನಿರ್ವಹಣೆ, ಓದುವ ಅಭ್ಯಾಸ, ಒಳ್ಳೆಯ ನಡತೆ, ಭಾಷಾ ಜ್ಞಾನ, ಆಂತರಿಕ ಪ್ರೇರಣೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ, ಶಿಸ್ತುಬದ್ಧ ಆಲೋಚನೆಯಂತಹ ಗುಣಗಳನ್ನು ಅಳವಡಿಸಿಕೊಂಡು ಸಮೃದ್ಧ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶುಕ್ರವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸುವ ಮೂಲಕ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಬೇಕು. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬಂತೆ ಬಾಲ್ಯದಿಂದಲೇ ಮಕ್ಕಳಿಗೆ ಜೀವನದ ಮೌಲ್ಯಗಳ ಅರಿವು ನೀಡಿ ಸುಸಂಸ್ಕೃತರನ್ನಾಗಿ ಬೆಳೆಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಹೇಳಿದರು.
ಕಾಲೇಜಿನಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು,
ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಪ್ರಾಚಾರ್ಯ ಯು ಕೆ ರಜಪೂತ ಅಧ್ಯಕ್ಷತೆ ವಹಿಸಿ ಮಾತನಾಡಿ,ಇಂದಿನ ವಿದ್ಯಾರ್ಥಿಗಳು ಪುಸ್ತಕ ಜ್ಞಾನದ ಜೊತೆ ಸಮಾಜದಲ್ಲಿನ ವಿಚಾರಗಳನ್ನು ಅರಿತು,ಬದುಕು ಕಟ್ಟಿಕೊಳ್ಳಬೇಕು.ಜೀವನಕ್ಕೆ ಸ್ಫೂರ್ತಿ ಬಹಳ ಮುಖ್ಯ. ನಮ್ಮ ದೇಶಕ್ಕೆ ಯುವ ಶಕ್ತಿಯ ಅಗತ್ಯವಿದ್ದು, ಯುವಶಕ್ತಿಯನ್ನು ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಬೆಳೆಸಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.
ಸಂಸ್ಥೆಯ ಉಪನ್ಯಾಸಕ ಗಂಗಾಧರ ಭಾಗೆಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಅಡಿಯಲ್ಲಿ ಅನೇಕ ವೃತ್ತಿ ಸಂಬಂಧಿತ ಕೋರ್ಸ್ ಗಳಿದ್ದು, ವ್ಯವಸ್ಥಿತ ಅಧ್ಯಯನ ಮಾಡಿ, ಜೀವನದ ಗುರಿಯನ್ನು ತಲುಪಬೇಕು ಎಂದು ಹೇಳಿದರು.
ಉಪನ್ಯಾಸಕ ರಮೇಶ ಮೇತ್ರಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಸಿಬ್ಬಂದಿಗಳಾದ ಪ್ರೇಮಾನಂದ ದೇಸಾಯಿ,ಸಂತೋಷ ಜಾಧವ,ರವಿ ಹಾದಿಮನಿ,ರವಿ ಪಡತಪ್ಪನವರ,ರೇಷ್ಮಾ ಹಾಗೂ ಪಾಲಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಿಗೆ ಸಮಯ ನಿರ್ವಹಣೆ ಬಹು ಮುಖ್ಯ -ಸಂತೋಷ ಬಂಡೆ

Leave a comment
Leave a comment