This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಳ್ಳದಿರಲು ನಿರ್ಧಾರ : ಪೂರ್ವಭಾವಿ ಸಭೆ ಬಹಿಷ್ಕರಿಸಿದ ಮುಖಂಡರು


ಮುದ್ದೇಬಿಹಾಳ: ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಲ್ಲಿ ನಿರ್ಲಕ್ಷ್ಯ ತೋರಿಸುತ್ತಿದೆ ಮತ್ತು ಇದೇ ವಿಷಯವಾಗಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಕಳೆದ ೨೩೨ ದಿನಗಳ ಕಾಲ ವಾಲ್ಮೀಕಿ ಗುರುಪೀಠದ ಪ್ರಸನ್ನನಾನಂದ ಸ್ವಾಮಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸ್ಪಂಧಿಸದ ಕ್ರಮ ಖಂಡಿಸಿ ವಾಲ್ಮೀಕಿ, ದಲಿತ ಮತ್ತು ಇನ್ನಿತರ ಸಂಘಟನೆಗಳ ಮುಖಂಡರು ಗುರುವಾರ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕರಿಸಿ, ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗ್ರೇಡ್-೨ ಉಮೇಶ ಲಮಾಣಿ ಅವರು ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವ ಮತ್ತು ಅದರಲ್ಲಿ ಎಲ್ಲರೂ ಪಾಲ್ಗೊಳ್ಳುವ ಕುರಿತು ಪ್ರಸ್ತಾಪ ಮಂಡಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಎಸ್ಟಿ, ಎಸ್ಟಿ ಪಂಗಡಗಳ ಮುಖಂಡರು ಸರ್ಕಾರಕ್ಕೆ ಮೀಸಲಾತಿ ಬೇಡಿಕೆ ಹೆಚ್ಚಳ ಮಾಡಲು ಸೆ.೨೮ರವರೆಗೂ ನೀಡಿದ್ದ ಗಡುವು ಮುಕ್ತಾಯಗೊಂಡರೂ ಯಾವುದೇ ರೀತಿಯಲ್ಲಿ ಸಕಾರಾತ್ಮಕವಾಗಿ ಸ್ಪಂಧಿಸಿಲ್ಲ. ಆದ್ಧರಿಂದ ಸಭೆ ಮತ್ತು ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸುವ ನಿರ್ಣಯ ಕೈಕೊಂಡಿದ್ದೇವೆ ಎಂದು ತಿಳಿಸಿ ಸಭೆಯಿಂದ ಹೊರ ಬಂದರು.


ಈ ವೇಳೆ ತಾಲೂಕು ಆಡಳಿತ ಸೌಧ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ದೇವೇಂದ್ರ ವಾಲಿಕಾರ ಅವರು, ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಬೇಡಿಕೆ ಈಡೇರಿಸಿಲ್ಲ. ಎಸ್ಸಿಯವರಿಗೆ ಶೇ.೧೫ ರಿಂದ ಶೇ.೧೭ಕ್ಕೆ, ಎಸ್ಟಿಯವರಿಗೆ ಶೇ.೩ ರಿಂದ ಶೇ.೭.೫ಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದು ವಾಲ್ಮೀಕಿ ಸಮಾಜದ ಸ್ವಾಮೀಜಿ ಪ್ರಸನ್ನಾನಂದರು ೨೩೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸ್ಪಂಧಿಸಿಲ್ಲ. ಸರ್ಕಾರದ ಆದೇಶದಂತೆ ತಾಲೂಕು ಆಡಳಿತ ವಾಲ್ಮೀಕಿ ಜಯಂತಿಯನ್ನು ಆಚರಿಸಿಕೊಳ್ಳಲಿ. ಎಸ್ಸಿ, ಎಸ್ಟಿ ಪಂಗಡಗಳು ಜನರು ಅದರಲ್ಲಿ ಭಾಗವಹಿಸುವುದಿಲ್ಲ. ಆದರೆ ನಾವೇ ಸ್ವಂತವಾಗಿ ನಮ್ಮ ಓಣಿ, ಮನೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸುತ್ತೇವೆ. ಈ ಸರ್ಕಾರಕ್ಕೆ ಧಿಕ್ಕಾರ ಹಾಕುತ್ತೇವೆ ಎಂದು ಹೇಳಿದರು.
ಎಪಿಎಂಸಿ ನಿರ್ದೇಶಕ ವೈ.ಎಚ್.ವಿಜಯಕರ್ ಮಾತನಾಡಿ ಸರ್ಕಾರದ ಕೆಟ್ಟ ನಿರ್ಧಾರ ಎಸ್ಸಿ, ಎಸ್ಟಿ ಸಮಾಜದವರಿಗೆ ನೋವುಂಟು ಮಾಡಿದೆ. ಅಹೋರಾತ್ರಿ ಧರಣಿ ನಡೆಸುತ್ತಿರುವ ಶ್ರೀಗಳ ಆರೋಗ್ಯವೂ ಕ್ಷೀಣಿಸತೊಡಗಿದೆ. ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯಕಮಕ್ಕಳ ನೇತೃತ್ವದಲ್ಲಿ ಎಸ್ಸಿ, ಎಸ್ಟಿ ಮುಖಂಡರು ಸಭೆ ಬಹಿಷ್ಕರಿಸಿದ್ದೇವೆ. ಮುಂದಿನ ದಿನಗಳಲ್ಲಿ ಮೀಸಲಾತಿ ಹೆಚ್ಚಳ ಬೇಡಿಕೆ ಕುರಿತು ಸ್ಥಳೀಯ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಜೊತೆಗೆ ಮುಂದಿನ ದಿನಗಳಲ್ಲಿ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಕ್ಕೂ ಬಹಿಷ್ಕಾರ ಹಾಕುವ ಪರಿಸ್ಥಿತಿ ತಲೆದೋರಲಿದೆ ಎಂದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಮಾತನಾಡಿ ಮೀಸಲಾತಿ ಹೆಚ್ಚಳ ಬೇಡಿಕೆ ಈಡೇರಿಸುವವರೆಗೆ ನಮ್ಮ ನಿಲುವು ಸಡಿಲಿಸುವುದಿಲ್ಲ. ಪೂರ್ವಭಾವಿ ಸಭೆಗೆ ಬಹಿಷ್ಕಾರ ಹಾಕಿ ಧಿಕ್ಕಾರ ಕೂಗಿದ್ದೇವೆ. ವಾಲ್ಮೀಕಿ ಜಯಂತಿ ಸೇರಿದಂತೆ ಮುಂಬರುವ ಜಯಂತಿಗಳನ್ನು ನಮ್ಮ ಮನೆಯಲ್ಲಿ, ಓಣಿಗಳಲ್ಲಿ ಆಚರಿಸುತ್ತೇವೆಯೇ ಹೊರತು ಸರ್ಕಾರಿ ಆಚರಣೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದರು.
ಇದಕ್ಕೂ ಮುನ್ನ ಸಭೆಯಲ್ಲಿ ತಹಶೀಲ್ದಾರ್, ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖ ತಮ್ಮ ಆಕ್ಷೇಪಣೆ ವ್ಯಕ್ತಪಡಿಸಿದ ಮುಖಂಡರು ಸಭೆಯಲ್ಲೇ ಸರ್ಕಾರಕ್ಕೆ ಧಿಕ್ಕಾರ ಕೂಗಿ, ಸಭೆ ಬಹಿಷ್ಕರಿಸುವುದಾಗಿ ತಿಳಿಸಿ ಸಭೆಯಿಂದ ಹೊರ ನಡೆದರು.
ಬಲಭೀಮ ನಾಯಕಮಕ್ಕಳ, ಹಣಮಂತ ನಾಯಕಮಕ್ಕಳ, ಗದ್ದೆಪ್ಪ ಹುಲ್ಲಳ್ಳಿ, ರಾಮಣ್ಣ ರಾಜನಾಳ, ಸಂತೋಷ ನಾಯಕ, ಪವನ್ ಧನ್ನೂರ, ನಿಂಗಣ್ಣ ಜಕ್ಕೇರಾಳ, ರಾಮು ದಳವಾಯಿ, ಮಂಜುನಾಥ ಪೂಜಾರಿ, ಪ್ರಕಾಶ ಚಲವಾದಿ, ದೇವರಾಜ ಹಂಗರಗಿ, ಬಸವರಾಜ ಪೂಜಾರಿ, ಪರಶುರಾಮ ಹಡಲಗೇರಿ ಸೇರಿ ಹಲವರು ಇದ್ದರು. ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಬಿಜೆಪಿ ಪದಾಧಿಕಾರಿಯಿಂದ ಧಿಕ್ಕಾರ:
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ವಿಜಯಪುರ ಜಿಲ್ಲೆಯ ಬಿಜೆಪಿಯ ಎಸ್ಟಿ ಮೋರ್ಚಾ ಘಟಕಕ್ಕೆ ದೇವೇಂದ್ರ ವಾಲಿಕಾರ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ವಾಲ್ಮೀಕಿ ಜಯಂತಿ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಮತ್ತು ಸಭೆಯ ನಂತರ ಆಡಳಿತ ಸರ್ಕಾರ ಪ್ರತಿನಿಧಿಸುವ ಪಕ್ಷದ ಪದಾಧಿಕಾರಿಯೊಬ್ಬರು ತಮ್ಮದೇ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದು ಅಧಿಕಾರಿಗಳ ಅಚ್ಚರಿಗೆ ಕಾರಣವಾಯಿತು. ಬಿಜೆಪಿಯ ಪದಾಧಿಕಾರಿಯೊಬ್ಬರು ತಮ್ಮದೇ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದು, ಸರ್ಕಾರಿ ಕಾರ್ಯಕ್ರಮದ ಭಾಗವಾದ ತಹಶೀಲ್ದಾರ್ ಅಧ್ಯಕ್ಷತೆಯ ಪೂರ್ವಭಾವಿ ಸಭೆಗೆ ಬಹಿಷ್ಕಾರ ಹಾಕಿದ್ದು ತೀವ್ರ ಚರ್ಚೆಗೆ ದಾರಿ ಮಾಡಿಕೊಟ್ಟಿತು.


Leave a Reply