ಕಾಂಗ್ರೆಸ್ ಗೆ ಆಘಾತ: ದೆಹಲಿಯ ಇಬ್ಬರು ಮಾಜಿ ಶಾಸಕರ ರಾಜೀನಾಮೆ

Ravi Talawar
WhatsApp Group Join Now
Telegram Group Join Now

ನವದೆಹಲಿ01: ದೆಹಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಎಎಪಿ ಕಳೆದ 7 ವರ್ಷಗಳಿಂದ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದ್ದು ನಾವು ಮತ್ತೆ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅವಮಾನಕರಿಯಾಗಿದೆ.

ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಅಲ್ಲದೇ ಪಕ್ಷದ ಇತರೆ ಮುಖಂಡರುಗಳ ವಿರುದ್ಧ ಮದ್ಯ ಹಗರಣ, ಜಲ ಮಂಡಳಿ ಹಗರಣ ಸೇರಿದಂತೆ ವಿವಿಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಇಂತಹವರ ಜೊತೆ ನಮ್ಮ ಮೈತ್ರಿ ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬೆಳವಣಿಗೆಗಳಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇತ್ತ ಮಧ್ಯಪ್ರದೇಶದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಮ್ನಿವಾಸ್ ರಾವತ್ ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‍ಗೆ ದೊಡ್ಡ ಆಘಾತವಾಗಿದೆ. ರಾವತ್ ಅವರು ದಿಗ್ವಿಜಯ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಂಸದ ಕಾಂಗ್ರೆಸ್‍ನ ಕಾರ್ಯಕಾರಿ ಅಧ್ಯಕ್ಷರಾಗಿದ್ದರು. ಸಂಸದ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿರುವಾಗಲೇ ರಾವತ್ ಪಕ್ಷಾಂತರ ನಡೆದಿರುವುದು ಅಚ್ಚರಿ ಮೂಡಿಸಿದೆ.

WhatsApp Group Join Now
Telegram Group Join Now
Share This Article