ಮತ್ತೆ ಮೂವರು ನಕ್ಸಲೀಯರ ಹತ್ಯೆ: ಛತ್ತೀಸಗಢದಲ್ಲಿ ಗುಂಡಿನ ಚಕಮಕಿ; ಸಾವಿನ ಸಂಖ್ಯೆ 16ಕ್ಕೆ ಏರಿಕೆ

Ravi Talawar
WhatsApp Group Join Now
Telegram Group Join Now

ಬಸ್ತಾರ್, ಏ.06: ಛತ್ತೀಸಗಢ ಮತ್ತು ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶನಿವಾರ ಬೆಳಗಿನ ಜಾವ ನಡೆಸಿದ ಗುಂಡಿನ ಚಕಮಕಿಯಲ್ಲಿ ಮತ್ತೆ ಮೂವರು ನಕ್ಸಲೀಯರು ಹತರಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವಾರವಷ್ಟೇ ಛತ್ತೀಸಗಢದ ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ 13 ನಕ್ಸಲರು ಹತ್ಯೆಗೀಡಾಗಿದ್ದರು. ದಾಂತೇವಾಡ ಸೇರಿದಂತೆ ವಾರದೊಳಗೆ ನಡೆದ ಮೂರನೇ ದಾಳಿ ಇದಾಗಿದ್ದು, ದಾಳಿ ವೇಳೆ ಮೃತಪಟ್ಟವರ ಸಂಖ್ಯೆ ಇದೀಗ 16ಕ್ಕೆ ಏರಿಕೆಯಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಭದ್ರತಾ ಪಡೆಗಳು ಶನಿವಾರ ಬಂಡುಕೋರರ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ, ಗುಂಡಿನ ಚಕಮಕಿ ನಡೆದಿದ್ದು, ಮೂವರು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಘಟನಾ ಸ್ಥಳದಿಂದ ನಕ್ಸಲೀಯರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ತೆಲಂಗಾಣ ಗ್ರೇಹೌಂಡ್ ಮತ್ತು ಛತ್ತೀಸ್‌ಗಢ ಪೊಲೀಸರು ಜಂಟಿಯಾಗಿ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆ ಇದಾಗಿದ್ದು, ಈ ಮಹತ್ವದ ಕಾರ್ಯಾಚರಣೆಯಲ್ಲಿ ಸೈನಿಕರು ಅತಿದೊಡ್ಡ ಯಶಸ್ಸನ್ನು ಸಾಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

ಎನ್‌ಕೌಂಟರ್ ನಡೆದ ಸ್ಥಳ: ಉಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಕೇರ್‌ನ ಕರ್ರಿಗುಟಾ ಅರಣ್ಯದಲ್ಲಿ ಛತ್ತೀಸ್‌ಗಢ ಪೊಲೀಸರ ನೆರವಿನೊಂದಿಗೆ ತೆಲಂಗಾಣದ ನಕ್ಸಲ್ ವಿರೋಧಿ ಪಡೆ ಗ್ರೇಹೌಂಡ್ಸ್ ತಂಡದ ನೇತೃತ್ವದಲ್ಲಿ ಈ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲಾಯಿತು. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ, ಒಂದು ಲಘು ಮೆಷಿನ್ ಗನ್ (LMG) ಮತ್ತು ಒಂದು AK 47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಮತ್ತು ನಕ್ಸಲೀಯರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article