ಬೆಂಗಳೂರು :ಶೀಘ್ರವೇ ಲೋಕಾಯುಕ್ತದಲ್ಲಿ ಖಾಲಿ ಇರುವ 557 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಬೋಸ್ ರಾಜ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸದಸ್ಯ ಗೋವಿಂದ್ ರಾಜ್ ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ 556 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತದಲ್ಲಿ ಒಟ್ಟು 1146 ಹುದ್ದೆಗಳಿವೆ. ಇದರಲ್ಲಿ 556 ಹುದ್ದೆಗಳು ಖಾಲಿಯಿವೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ,ಎಸಿಬಿ ಮುಚ್ಚಿಹೋಗಿರುವುದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗುತ್ತದೆ, ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಸಚಿವ ಬೋಸ್ ರಾಜ್ ಹೇಳಿದರು.