ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಏ.05, ಬಾಬು ಜಗಜೀವನ್ ರಾಮ್ ಅವರು, ದೀನ-ದಲಿತರಿಗೆ ನ್ಯಾಯ ಒದಗಿಸಲು ಶ್ರಮಿಸಿದರು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪೆÇ್ರ.ರಮೇಶ್ ಓಲೇಕಾರ್ ಅವರು ಹೇಳಿದರು.

ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಬು ಜಗಜೀವನ್ ರಾಮ್ ಶೋಷಿತರ ಹಕ್ಕಿಗಾಗಿ ಹೋರಾಡಿದವರು, ಹಸಿರು ಕ್ರಾಂತಿಯ ಹರಿಕಾರ. ಆಹಾರ ಉತ್ಪಾದನೆಯಲ್ಲಿ ಅವರ ಸೇವೆ ಸ್ಮರಣೀಯವಾದುದು. ಜಗಜೀವನ್‍ರಾಮ್ ಅವರ ಜೀವನ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾದ ಡಾ.ಹೆಚ್.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಾಬು ಜಗಜೀವನ್ ರಾಮ್ ಅವರ ವಿಚಾರಗಳು ಇಂದಿಗೂ ಅವಿಸ್ಮರಣೀಯವಾಗಿ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ಡಾ.ಕುಮಾರ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article