ಸಲ್ಮಾನ್ ನಿವಾಸದ ಹೊರಗೆ ಗುಂಡಿನ ದಾಳಿ ಪ್ರಕರಣ: ನದಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ

Ravi Talawar
WhatsApp Group Join Now
Telegram Group Join Now

ದೆಹಲಿ,23 ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡುವ ಶೋಧ ಕಾರ್ಯಾಚರಣೆಯಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ ಎರಡು ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಆರಂಭವಾದ ಶೋಧ ಕಾರ್ಯದಲ್ಲಿ ಅಪರಾಧ ವಿಭಾಗದ ಅಧಿಕಾರಿಗಳು ಎರಡು ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು ಮತ್ತು 13 ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಸೇರಿದಂತೆ 12 ಅಧಿಕಾರಿಗಳ ತಂಡ ಇನ್ನೂ ಸ್ಥಳದಲ್ಲಿಯೇ ಇದೆ. ಸ್ಕೂಬಾ ಡೈವರ್‌ಗಳ ಸಹಾಯದಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದರು.ಇಬ್ಬರು ಬಂಧಿತ ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಪ್ರಿಲ್ 14 ರಂದು ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿ ನಂತರ ಮೋಟಾರ್‌ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.

ತಾಂತ್ರಿಕ ಕಣ್ಗಾವಲು ಆಧರಿಸಿ, ಅವರನ್ನು ಏಪ್ರಿಲ್ 16 ರಂದು ಮುಂಬೈ ಮತ್ತು ಕಚ್ ಪೊಲೀಸರ ಜಂಟಿ ತಂಡಗಳು ಗುಜರಾತ್‌ನ ಭುಜ್ ಪಟ್ಟಣದ ಬಳಿಯ ಮಾತಾ ನೊ ಮಧ್‌ನಲ್ಲಿರುವ ದೇವಾಲಯದ ಆವರಣದಲ್ಲಿ ಬಂಧಿಸಲಾಗಿತ್ತು. ನಂತರ ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಮೂಲಗಳ ಪ್ರಕಾರ, ಗುಂಡಿನ ದಾಳಿಯ ನಂತರ ಮುಂಬೈನಿಂದ ರಸ್ತೆಯ ಮೂಲಕ ಸೂರತ್ ತಲುಪಿದ ನಂತರ ರೈಲಿನಲ್ಲಿ ಭುಜ್‌ಗೆ ಪಲಾಯನ ಮಾಡುತ್ತಿದ್ದಾಗ ರೈಲ್ವೆ ಸೇತುವೆಯಿಂದ ತಾಪಿ ನದಿಗೆ ಆಯುಧವನ್ನು ಎಸೆದಿದ್ದೇವೆ ಎಂದು ಇಬ್ಬರೂ ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ಹೇಳಿದ್ದರು. ಗುಪ್ತಾ ಮತ್ತು ಪಾಲ್ ಇಬ್ಬರು ಬಿಷ್ಣೋಯ್ ಸಹೋದರರಿಂದ ಸೂಚನೆಗಳನ್ನು ಸ್ವೀಕರಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article